ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಎಲ್ಲಾ ಜಾತಿ-ಧರ್ಮಗಳನ್ನು ಪ್ರೀತಿಸಿ, ಗೌರವಿಸಿ: ಪ್ರೋ. ಎಲ್.ಎನ್. ಮುಕುಂದರಾಜು

Posted on July 6, 2026July 6, 2026 by suddisangathi

ಡಾ. ಅಮ್ಮಸಂದ್ರ ಸುರೇಶ್ ಅವರ ‘ಅಂಚೆ ಕಥನ’ ಕೃತಿ ಲೋಕಾರ್ಪಣೆ

ಬೆಂಗಳೂರು, ಜು. 6: ಪ್ರತಿಯೊಬ್ಬರಿಗೂ ತಮ್ಮ ಜಾತಿ, ಧರ್ಮ ಹಾಗೂ ಸಂಪ್ರದಾಯಗಳ ಬಗ್ಗೆ ಅಭಿಮಾನ ಮತ್ತು ಗೌರವ ಇರುವಂತೆಯೇ, ಇತರರ ಜಾತಿ, ಧರ್ಮ, ಸಂಸ್ಕೃತಿ ಹಾಗೂ ಆಚರಣೆಗಳ ಬಗ್ಗೆಯೂ ಪ್ರೀತಿ, ಸಹಿಷ್ಣುತೆ ಮತ್ತು ಗೌರವದ ಮನೋಭಾವ ಇರಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೋ. ಎಲ್.ಎನ್. ಮುಕುಂದರಾಜು ಹೇಳಿದರು.

ನಗರದ ಕಬ್ಬನ್ ಪಾರ್ಕ್‌ನ ಎನ್‌ಜಿಒ ಸಭಾಂಗಣದಲ್ಲಿ ಅಖಿಲ ಭಾರತ ಅಂಚೆ ನೌಕರರ ಸಂಘ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ. ಅಮ್ಮಸಂದ್ರ ಸುರೇಶ್ ಅವರ ‘ಅಂಚೆ ಕಥನ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಒಂದು ಕಾಲದಲ್ಲಿ ನಾನೂ ಸಹ ಕೋಮುವಾದಿ ಮನೋಭಾವ ಹೊಂದಿದ್ದೆ. ಆದರೆ ಕನ್ನಡ ಸಾಹಿತ್ಯದ ಅಧ್ಯಯನದಿಂದ ಮಾನವೀಯತೆ ಮತ್ತು ಸಹಬಾಳ್ವೆಯ ನಿಜವಾದ ಅರ್ಥ ಅರಿವಾಯಿತು. ಸಾವಿರಾರು ವರ್ಷಗಳಿಂದ ಕನ್ನಡ ಸಾಹಿತ್ಯವೇ ಸಮಾನತೆ, ಸಹಿಷ್ಣುತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರುತ್ತ ಬಂದಿದೆ” ಎಂದು ಅವರು ವಿವಿಧ ಸಾಹಿತ್ಯ ಕೃತಿಗಳ ಉದಾಹರಣೆಗಳೊಂದಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಚೆ ಇಲಾಖೆಯ ನಿರ್ದೇಶಕ ಸಂದೇಶ್ ಮಹಾದೇವಪ್ಪ ಮಾತನಾಡಿ, ಹಣ ಮಾತ್ರ ಜೀವನದಲ್ಲಿ ತೃಪ್ತಿ ನೀಡುವುದಿಲ್ಲ. ತಮ್ಮ ಮನಸ್ಸಿಗೆ ಹತ್ತಿರವಾದ ಕೆಲಸಗಳಲ್ಲಿ ತೊಡಗಿಸಿಕೊಂಡಾಗಲೇ ನಿಜವಾದ ಸಂತೃಪ್ತಿ ದೊರೆಯುತ್ತದೆ. ಸಾಹಿತ್ಯ ಸೃಜನಶೀಲತೆಯೂ ಅಂತಹ ತೃಪ್ತಿಯನ್ನು ನೀಡುವ ಸಾಧನವಾಗಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಅಂಚೆ ಇಲಾಖೆಯಲ್ಲಿ ಆಗುತ್ತಿರುವ ಆಧುನೀಕರಣ ಮತ್ತು ತಂತ್ರಜ್ಞಾನ ಅಳವಡಿಕೆ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪತ್ರಕರ್ತ ಹಾಗೂ ಲೇಖಕ ಮಂಜುನಾಥ್ ದಂಡಿನಶಿವರ ಮಾತನಾಡಿ, ‘ಅಂಚೆ ಕಥನ’ ಎಂಬ ಶೀರ್ಷಿಕೆಯೇ ಓದುಗರಲ್ಲಿ ಕುತೂಹಲ ಮೂಡಿಸುತ್ತದೆ. ಅಂಚೆ ವ್ಯವಸ್ಥೆ ಕೇವಲ ಪತ್ರಗಳನ್ನು ಸಾಗಿಸುವ ವ್ಯವಸ್ಥೆಯಲ್ಲ; ಅದು ಕುಟುಂಬಗಳ ನೆನಪುಗಳು, ಭಾವನೆಗಳು, ಸಂಬಂಧಗಳು ಹಾಗೂ ಸಮಾಜದ ಇತಿಹಾಸವನ್ನು ಹೊತ್ತು ಸಾಗಿದ ಜೀವಂತ ಮಾಧ್ಯಮವಾಗಿದೆ. ಅಂತಹ ಅಪರೂಪದ ಅನುಭವಗಳನ್ನು ದಾಖಲಿಸಿರುವ ಈ ಕೃತಿ ಸಾಹಿತ್ಯ ಲೋಕದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಪಡೆದುಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕೃತಿಯ ಲೇಖಕ ಡಾ. ಅಮ್ಮಸಂದ್ರ ಸುರೇಶ್, ಪ್ರಕಾಶಕ ಸಿದ್ದೇಶ್ವರಪ್ಪ, ಅಂಚೆ ಇಲಾಖೆಯ ರವಿ ಬಿ. ಪಾಟೀಲ್, ರಾಜೇಶ್ ಭಾಸ್ಕರ್, ಜಿಪಿಒ ಚಂದ್ರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ವರಾಮೃತ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸುಗಮ ಸಂಗೀತ ಕಾರ್ಯಕ್ರಮ ಹಾಗೂ ಅಂಕುರ ಮಂಜುನಾಥ್ ಅವರಿಂದ ಹೋರಾಟದ ಗೀತೆಗಳ ಗಾಯನ ನಡೆಯಿತು.

 

 

1 thought on “ಎಲ್ಲಾ ಜಾತಿ-ಧರ್ಮಗಳನ್ನು ಪ್ರೀತಿಸಿ, ಗೌರವಿಸಿ: ಪ್ರೋ. ಎಲ್.ಎನ್. ಮುಕುಂದರಾಜು”

  1. ಜೀವನ್ಮುಖಿ ಸುರೇಶ್ says:
    July 6, 2026 at 2:10 pm

    ಸುದ್ದಿ ಧ್ವನಿ ಪತ್ರಿಕೆ ಒಳ್ಳೆಯ ಲೇಖನಗಳನ್ನು ಪ್ರಕಟಿಸುತ್ತಾ ಬರುತ್ತಿದ್ದು ಹಾಗೂ ಸಮಾಜದ ಆಗುಹೋಗುಗಳ ಬಗ್ಗೆ ವಿಸ್ತಾರವಾಗಿ ವರದಿಗಳನ್ನು ಪ್ರಕಟಿಸುತ್ತ ಜನರ ಮನಸ್ಸಿನಲ್ಲಿ ಹಸಿರಾಗಿ ಉಳಿದಿದೆ

    Reply

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb