ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಅಧಿಕೃತ ಹಂತ ತಲುಪಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ನಿರ್ಧಾರದಿಂದ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ದಾರಿಗೆ ಅಧಿಕೃತ ಮನ್ನಣೆ ದೊರೆತಂತಾಗಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯವೂ ಅಂತಿಮಗೊಳಿಸಲಾಗಿದೆ.
ಪಕ್ಷದ ಹೈಕಮಾಂಡ್ ಸೂಚನೆಯಂತೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಶನಿವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಭಾಗವಹಿಸಿ ನೂತನ ನಾಯಕನ ಆಯ್ಕೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ರಣ್ ದೀಪ್ಸಿಂಗ್ ಸುಜೆವಾಲ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್
ಉಪಸ್ಥಿತರಿದ್ದು, ಆಯ್ಕೆ ಪ್ರಕ್ರಿಯೆಗೆ ಅಂತಿಮ ರೂಪ ನೀಡಿದರು. ಈ ಬೆಳವಣಿಗೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭದತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ವಿಡಿಯೋ ಕೃಪೆ: ಎಎನ್ಐ

