ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಮತದಾನದ ಹಕ್ಕಿಗಾಗಿ ಅಧಿಕಾರಿಗಳ ಹಿಂದೆ ಅಲೆಯುವ ಸ್ಥಿತಿ ಬೇಡ: ಪ್ರಕಾಶ್ ರಾಜ್

Posted on August 15, 2026 by suddisangathi

ಬೆಂಗಳೂರು: ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಲು ಜನರು ಚುನಾವಣಾ ಅಧಿಕಾರಿಗಳ ಹಿಂದೆ ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ನಟ ಪ್ರಕಾಶ್ ರಾಜ್ ಚುನಾವಣಾ ಆಯೋಗದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (SIR) ಕ್ರಮದ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದರು.

“ಮತದಾನದ ಹಕ್ಕು ನಮ್ಮ ಮೂಲಭೂತ ಹಕ್ಕು. ಅದನ್ನು ಪಡೆಯಲು ನಾವು ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿ ಬರಬಾರದು” ಎಂದು ಪ್ರಕಾಶ್ ರಾಜ್ ಹೇಳಿದರು.

ರಾಜ್ಯದಲ್ಲಿರುವ ಸುಮಾರು 5.54 ಕೋಟಿ ಮತದಾರರ ಮಾಹಿತಿಯನ್ನು ಕೇವಲ ಒಂದು ತಿಂಗಳ ಅವಧಿಯಲ್ಲಿ ಪರಿಶೀಲಿಸಿ ಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಈ ಪ್ರಕ್ರಿಯೆಯಿಂದ ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೂ ಅನಗತ್ಯ ಒತ್ತಡ ಉಂಟಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಚುನಾವಣಾ ಆಯೋಗದ ಪ್ರಸ್ತುತ ಕ್ರಮಗಳು ಮತದಾರರನ್ನು ಮತದಾನದಿಂದ ಹೊರಗಿಡುವ ಪ್ರಯತ್ನದಂತೆ ಕಾಣುತ್ತಿವೆ ಎಂದು ಆರೋಪಿಸಿದ ಅವರು, “ಹಿಂದೆ ರಾಜಕೀಯ ನಾಯಕರು ಮತ ಹಾಕುವಂತೆ ಜನರನ್ನು ಕೇಳಿಕೊಳ್ಳುತ್ತಿದ್ದರು. ಆದರೆ ಈಗ ಮತದಾರರೇ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಡಿ ಎಂದು ಅಧಿಕಾರಿಗಳ ಮುಂದೆ ಮನವಿ ಮಾಡುವ ಪರಿಸ್ಥಿತಿ ಬಂದಿದೆ” ಎಂದರು.

ನೋಟು ಅಮಾನ್ಯೀಕರಣ ಮತ್ತು ಕೊರೋನಾ ಸಂದರ್ಭದಲ್ಲಿ ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಅನುಭವಿಸಿದ ಸಂಕಷ್ಟಗಳನ್ನು ಉಲ್ಲೇಖಿಸಿದ ಪ್ರಕಾಶ್ ರಾಜ್, SIR ಹೆಸರಿನಲ್ಲಿ ಜನರಿಗೆ ಮತ್ತಷ್ಟು ತೊಂದರೆ ನೀಡಬಾರದು ಎಂದು ಆಗ್ರಹಿಸಿದರು.

ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಚುನಾವಣೆ ಇಲ್ಲದಿರುವಾಗ ಮತದಾರರ ಪಟ್ಟಿಯನ್ನು ಇಷ್ಟೊಂದು ತುರ್ತಾಗಿ ಪರಿಷ್ಕರಿಸುವ ಅಗತ್ಯವೇನು ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ರಾಷ್ಟ್ರೀಯ ನಾಗರಿಕರ ನೋಂದಣಿ (NRC)ಗೆ ಸಂಬಂಧಿಸಿದ ಉದ್ದೇಶವಿದೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದರು.

ಮತದಾರರ ಪಟ್ಟಿಯಿಂದ ದಲಿತರು, ಹಿಂದುಳಿದವರು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಮತಗಳನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದರು.

ವಿಳಾಸ ಬದಲಾವಣೆಯ ಸಂದರ್ಭದಲ್ಲಿ ಮತದಾರರು ಫಾರಂ ನಂ. 8 ಸಲ್ಲಿಸಿ ವಿಳಾಸ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ. ಆದರೆ ಕೆಲ ಸಂದರ್ಭಗಳಲ್ಲಿ ಹಳೆಯ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿ, ಹೊಸದಾಗಿ ಫಾರಂ ನಂ. 6 ಸಲ್ಲಿಸುವಂತೆ ಸೂಚಿಸಲಾಗುತ್ತಿದೆ. ಇದು ಯಾವ ನ್ಯಾಯ ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು.

“ಜನರು ಬಾಡಿಗೆ ಮನೆ ಬದಲಾಯಿಸುವುದು ಅಥವಾ ಮದುವೆಯಾದ ಮಹಿಳೆಯರು ಹೊಸ ವಿಳಾಸಕ್ಕೆ ಸ್ಥಳಾಂತರಗೊಳ್ಳುವುದು ಅಪರಾಧವೇ? ಕೇವಲ ಮನೆ ಬದಲಾಯಿಸಿದ ಕಾರಣಕ್ಕೆ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕುವುದು ಸರಿಯಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮತದಾರರ ಹಕ್ಕುಗಳನ್ನು ರಕ್ಷಿಸುವುದು ಚುನಾವಣಾ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದ್ದು, ಪರಿಷ್ಕರಣೆಯ ಹೆಸರಿನಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಚುನಾವಣಾ ಆಯೋಗ ಎಚ್ಚರಿಕೆ ವಹಿಸಬೇಕು ಎಂದು ಪ್ರಕಾಶ್ ರಾಜ್ ಒತ್ತಾಯಿಸಿದರು.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb