ಅರ್ಜಿ ಡೌನ್ಲೋಡ್ ಮಾಡಲು ಈ ಲಿಂಕ್ ಬಳಸಿ
ಬೆಂಗಳೂರು, ಜೂನ್ 8:
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ವಿದ್ಯಾರ್ಥಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದ್ದಾರೆ. ತಮ್ಮ ಮೊದಲ ಘೋಷಣೆಗಳಲ್ಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ.
ಈ ಹಿಂದೆ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಲು 150 ರೂಪಾಯಿಗಳಿಂದ 1,830 ರೂಪಾಯಿಗಳವರೆಗೆ ಶುಲ್ಕ ಪಾವತಿಸಬೇಕಾಗಿತ್ತು. ಆದರೆ ಇದೀಗ ರಾಜ್ಯದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಈ ಯೋಜನೆಯಡಿ ಈಗಾಗಲೇ ಶಕ್ತಿ ಯೋಜನೆಯ ಮೂಲಕ ಉಚಿತ ಪ್ರಯಾಣ ಸೌಲಭ್ಯ ಪಡೆಯುತ್ತಿರುವ ವಿದ್ಯಾರ್ಥಿನಿಯರ ಜೊತೆಗೆ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ಲಭ್ಯವಾಗಲಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಾಗಲಿದ್ದು, ಶಿಕ್ಷಣ ಪಡೆಯಲು ಪ್ರಯಾಣ ವೆಚ್ಚದ ಹೊರೆ ಕಡಿಮೆಯಾಗಲಿದೆ.
ಆದರೆ ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕಾಗಿದೆ. ಸೇವಾಸಿಂಧು (Seva Sindhu) ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ.
ಉಚಿತ ಬಸ್ ಪಾಸ್ ಯೋಜನೆ ರಾಜ್ಯದ ವಿದ್ಯಾರ್ಥಿ ಸಮುದಾಯದಲ್ಲಿ ಸಂತಸ ಮೂಡಿಸಿದ್ದು, ಶಿಕ್ಷಣಕ್ಕೆ ಉತ್ತೇಜನ ನೀಡುವ ಮಹತ್ವದ ಕ್ರಮವೆಂದು ಹಲವರು ಸ್ವಾಗತಿಸಿದ್ದಾರೆ. ಯೋಜನೆಯ ಅನುಷ್ಠಾನ ಮತ್ತು ಅರ್ಜಿ ಸಲ್ಲಿಕೆ ಕುರಿತ ಹೆಚ್ಚಿನ ಮಾರ್ಗಸೂಚಿಗಳನ್ನು ಸರ್ಕಾರ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.
StudentPassDeclaration (1) ಅರ್ಜಿಗಾಗಿ ಇದನ್ನು ಕ್ಲಿಕ್ ಮಾಡಿ.

