ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ತುರುವೇಕೆರೆಯಲ್ಲಿ ಪ್ರತಿಭಟನೆ

Posted on June 13, 2026 by suddisangathi
https://suddisangathidwani.in/wp-content/uploads/2026/06/WhatsApp-Video-2026-06-13-at-11.43.00-AM.mp4

 

ವರದಿ: ಧರಣೇಶ್

ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ. ತುಮಕೂರು ಘಟಕದ ಸಂಘಟನಾ ಸಂಚಾಲಕ ನರಸಿಂಹಣ್ಣ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಾಹಿಸುತ್ತಿರುವ ವಿದ್ಯುತ್ ಇಲಾಖೆಯ ನ್ನು ಖಾಸಗಿಕರಣ ಮಾಡಲು ಅದಿಸೂಚನೆ ಹೊರಡಿಸಿದ್ದು ಅಕ್ಷೇಪಣೆ ಸಲ್ಲಿಸಲು ಇದೇ ತಿಂಗಳ 23 ರಂದು ಕೊನೆಯ ದಿನವಾಗಿದೆ ಅದ್ದರಿಂದ ಕೆಇಆರ್.ಸಿಗೆ ಸಾರ್ವಜನಿಕರು, ರೈತರು ಅಕ್ಷೇಪಣೆ ಸಲ್ಲಿಸುವಂತೆ ಮನವಿ ಮಾಡಿದರು.
ನಾವು ಜನರ ಸೇವೆ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ಖಾಸಗಿ ಕಂಪನಿಯಾದರೆ ಕೇವಲ ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ, ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಹೊಸ ನೇಮಕಾತಿಯೂ ಮಾಡುವುದಿಲ್ಲ.ಖಾಸಗಿ ಕಂಪನಿಗಳಿಗೆ ಬಡ, ಮಧ್ಯಮ ದೀನ ದಲಿತರಿಗೆ ಮೀಸಲಾತಿ ಸಿಗದಂತಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆ ಬೆಳವಣಿಗೆ ಕುಂಠಿತಾಗುತ್ತದೆ. ಸರ್ಕಾರವು ಹಲವು ವರ್ಷಗಳ ಕಾಲ ಸಾರ್ವಜನಿಕರ ಹಣದಿಂದ ನಿರ್ಮಿಸಿದ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದು ನ್ಯಾಯಸಮ್ಮತವಲ್ಲ ಎಂದು ಒತ್ತಾಯಿಸಿದರು.
ಬೆಸ್ಕಾಂ ಎಇಇ ರಾಜಶೇಖರ್ ಮಾತನಾಡಿ ಖಾಸಗಿ ಕಂಪನಿಗಳು ನಗರ ಮತ್ತು ಲಾಭದಾಯಕ ಪ್ರದೇಶಗಳಿಗೆ ಮಾತ್ರ ಸೇವೆ ನೀಡುವ ಸಾಧ್ಯತೆ ಇದ್ದು, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳು ನಿರ್ಲಕ್ಷ್ಯಕ್ಕೊಳಗಾಗುವ ಸಾಧ್ಯತೆ ಇದೆ. ವಿದ್ಯುತ್ ದರಗಳಲ್ಲಿ ಬಾರಿ ಏರಿಕೆ, ಖಾಸಗಿ ಸಂಸ್ಥೆಗಳು ಹೆಚ್ಚಿನ ಲಾಭಕ್ಕಾಗಿ ವಿದ್ಯುತ್ ದರಗಳನ್ನು ಹೆಚ್ಚಿಸುವ ಅಪಾಯವಿದೆ. ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ.
ಸಾರ್ವಜನಿಕ ಹಣದಿಂದ ನಿರ್ಮಿಸಿರುವ ವಿದ್ಯುತ್ ಗ್ರಿಡ್, ಕಂಬಗಳು ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನರ ಹಣದ ದುರುಪಯೋಗವಾಗಲಿದೆ. ಗ್ರಾಹಕರಿಗೆ, ರೈತರ ನೀರಾವರಿ ಯೋಜನೆಗಳಿಗೆ ಉಚಿತ ವಿದ್ಯುತ್/ ರಿಯಾಯಿತಿ ದರದಲ್ಲಿ ಖಾಸಗಿ ಕಂಪನಿಗಳು ವಿದ್ಯುತ್ ಪೂರೈಸುವುದಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿ ಕೃಷಿಗೆ ಅಪಾಯಕಾರಿಯಾಗುತ್ತದೆ ಮತ್ತು ಅಗತ್ಯ ಅಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತದೆ. ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದ್ದು, ಇದನ್ನು ಖಾಸಗಿ ಲಾಭದ ಉದ್ದೇಶದ ಅಧೀನಕ್ಕೆ ನೀಡುವುದು ರಾಜ್ಯದ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕೆ ಮಾರಕವಾಗುತ್ತದೆ. ಇದನ್ನು ಲಾಭ ಲೆಕ್ಕಾಚಾರವಿಲ್ಲದೆ ಗ್ರಾಹಕರು ಕೈಗಾರಿಕೆ, ಕೃಷಿ ಅಭಿವೃದ್ಧಿಗೆ ಬಳಕೆ ಮಾಡುತ್ತಿದ್ದು, ಖಾಸಗಿಯವರು ಬರೀ ಲಾಭ ಮಾಡುವ ಉದ್ದೇಶ ಹೊಂದಿರುತ್ತಾರೆ.
ವಿದ್ಯುತ್ ಕ್ಷೇತ್ರದಲ್ಲಿ ಕೆಲವು ಭಾಗಗಳಲ್ಲಿ ಖಾಸಗಿ ಸಂಸ್ಥೆಗಳು ಪ್ರವೇಶಿಸಿದ್ದು, ಸಾರ್ವಜನಿಕ ಸೇವೆಗಳ ಮೇಲೆ ಪರಿಣಾಮ ಬೀರುತ್ತಿವೆ. ಕರ್ನಾಟಕದ ಜನರ ಹಿತಾಸಕ್ತಿ, ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ವಿದ್ಯುತ್ ಕಂಪನಿಗಳನ್ನು ಸರ್ಕಾರದ ಅಧೀನದಲ್ಲಿ ಮುಂದುವರೆಸಬೇಕಾಗಿ ಕೋರುತ್ತೇವೆ ಎಂದರು.
ಪ್ರತಿಭಟನೆಯಲ್ಲಿ ಎ.ಒ.ಹುಚ್ಚಪ್ಪ, ಎಸ್.ಒ ಗಳಾದ ನಾರಾಣಪ್ಪ, ಉಮೇಶ್ವರಯ್ಯ, ಧರಣೇಶ್, ಜಾನ್, ಕಾಂತರಾಜು ಸಿಬ್ಬಂದಿಗಳಾದ ಅಂಜನ್ ಸ್ವಾಮಿ, ಕಲ್ಲೇಗೌಡ, ವಿನಯ್, ಪುಟ್ಟರಾಜ್, ಬೈರಪ್ಪ ಸೇರಿದಂತೆ ಲೈನ್ ಮೆನ್ , ಗ್ಯಾಂಗ್ ಮಾನ್ ಹಾಗೂ ನಿವೃತ್ತ ನೌಕರರು ಇದ್ದರು.
12ಪೋಟೋ ಶಿರ್ಷಿಕೆ1 ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb