ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಸಾಹಿತ್ಯ–ರಂಗಭೂಮಿಗೆ ವೈಕುಂಠರಾಜು ಕೊಡುಗೆ ಅಪಾರ — ಬರಗೂರು ರಾಮಚಂದ್ರಪ್ಪ

Posted on May 18, 2026May 18, 2026 by suddisangathi

ಬೆಂಗಳೂರು: ಪತ್ರಿಕೋದ್ಯಮ, ರಂಗಭೂಮಿ ಮತ್ತು ಸಾಹಿತ್ಯ ಈ ಮೂರೂ ಕ್ಷೇತ್ರಗಳನ್ನು ಸಮಾನ ಉತ್ಸಾಹದಿಂದ ಅಪ್ಪಿಕೊಂಡಿದ್ದ ಹಿರಿಯ ಪತ್ರಕರ್ತ ಬಿ.ವಿ.ವೈಕುಂಠರಾಜು ಅವರು ಅನೇಕ ಪ್ರತಿಭೆಗಳಿಗೆ ದಾರಿದೀಪವಾಗಿದ್ದರು ಎಂದು ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ನಗರದ ಕಸಾಪದ ಕುವೆಂಪು ಸಭಾಂಗಣದಲ್ಲಿ ಭಾನುವಾರ ರಾಜರ್ಷಿ ಪ್ರಕಾಶನ ಆಯೋಜಿಸಿದ್ದ “ಪತ್ರಕರ್ತ ಬಿ.ವಿ.ವೈಕುಂಠರಾಜು–90 : ಒಂದು ನೆನಪು” ಸಾಹಿತ್ಯ ಸಂವಾದ ಹಾಗೂ ವಿವಿಧ ಲೇಖಕರ ಕೃತಿಗಳ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈಕುಂಠರಾಜು ಅವರು ಪತ್ರಿಕೋದ್ಯಮವನ್ನು ಕೇವಲ ಸುದ್ದಿಗಳ ಮಟ್ಟಕ್ಕೆ ಸೀಮಿತಗೊಳಿಸದೆ, ಸಾಹಿತ್ಯ ಮತ್ತು ಸಂಸ್ಕೃತಿಯೊಂದಿಗೆ ಬೆಸೆದು ಬೆಳೆಸಿದ ಅಪರೂಪದ ವ್ಯಕ್ತಿತ್ವವಾಗಿದ್ದರು ಎಂದು ಸ್ಮರಿಸಿದರು.

ಅಂದಿನ ದಿನಗಳಲ್ಲಿ ಪತ್ರಿಕೆಗಳ ಸಾಹಿತ್ಯ ಪುರವಣಿಗಳಿಗೆ ವಿಭಿನ್ನ ಮೆರುಗು ತಂದವರಲ್ಲಿ ವೈಕುಂಠರಾಜು ಪ್ರಮುಖರು. ಹೊಸ ಬರಹಗಾರರಿಗೆ ಅವಕಾಶ ಕಲ್ಪಿಸಿ, ಅನೇಕ ಸಾಹಿತ್ಯಾಸಕ್ತರನ್ನು ಪ್ರೋತ್ಸಾಹಿಸಿದ ಅವರ ಪಾತ್ರ ಇಂದು ಕೂಡ ಸ್ಮರಣೀಯವಾಗಿದೆ ಎಂದು ಬರಗೂರು ರಾಮಚಂದ್ರಪ್ಪ ಹೇಳಿದರು. ತಮ್ಮ ವೈಕುಂಠರಾಜು ಅವರೊಂದಿಗಿನ ಆತ್ಮೀಯ ಒಡನಾಟದ ನೆನಪುಗಳನ್ನು ಹಂಚಿಕೊಂಡ ಅವರು, ಸಾಹಿತ್ಯದಲ್ಲಿ ಅಧ್ಯಯನ, ಅನುಭವ ಮತ್ತು ಅಭಿವ್ಯಕ್ತಿ ಎಂಬ ಮೂರು ಅಂಶಗಳು ಸಮಾನವಾಗಿ ಬೆರೆತಾಗ ಮಾತ್ರ ಶ್ರೇಷ್ಠ ಕೃತಿಗಳು ಮೂಡಿಬರುತ್ತವೆ ಎಂದರು.

“ಇತ್ತೀಚಿನ ದಿನಗಳಲ್ಲಿ ಅಧ್ಯಯನಕ್ಕಿಂತ ಅಭಿವ್ಯಕ್ತಿಯೇ ಹೆಚ್ಚಾಗುತ್ತಿದೆ. ಹೆಚ್ಚು ಓದಿದಾಗಲೇ ಉತ್ತಮ ಬರವಣಿಗೆ ಸಾಧ್ಯ. ಹೊಸ ತಲೆಮಾರಿನ ಲೇಖಕರು ಗಂಭೀರ ಓದು ಮತ್ತು ಚಿಂತನೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಖ್ಯಾತ ಲೇಖಕಿ ಭಾಗ್ಯ ಕೃಷ್ಣಮೂರ್ತಿ ಮಾತನಾಡಿ, ವೈಕುಂಠರಾಜು ಅವರ ಬದುಕು ಮತ್ತು ಅವರ ದುರಂತ ಅಂತ್ಯದ ಕುರಿತು ಭಾವುಕರಾಗಿ ಸ್ಮರಿಸಿದರು. ಅವರ ವ್ಯಕ್ತಿತ್ವ, ಹೋರಾಟ ಮತ್ತು ಸಾಹಿತ್ಯಸೇವೆಯನ್ನು ಒಳಗೊಂಡ ಪುಸ್ತಕವೊಂದನ್ನು ಬರೆಯುವ ಆಶಯವನ್ನೂ ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಲೇಖಕಿ ಸಂಧ್ಯಾರೆಡ್ಡಿ, ಪ್ರಾಧ್ಯಾಪಕ ಸುಂದರ ರಾಜ್ ಅರಸ್, ಬೆಂಗಳೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಗಾಂಧಿ, ಪ್ರಗತಿಪರ ಚಿಂತಕ ಹಡವನಹಳ್ಳಿ ವೀರಣ್ಣಗೌಡ, ಪತ್ರಕರ್ತ ಮಂಜುನಾಥ್ ದಂಡಿನಶಿವರ, ಪ್ರಕಾಶಕ ಎಸ್.ಆರ್.ಗೋವಿಂದರಾಜು, ಕಸಾಪ ಜಿಲ್ಲಾ ಅಧ್ಯಕ್ಷ ಪ್ರಕಾಶಮೂರ್ತಿ ಹಾಗೂ ಸಂಘಟಕ ಜೀವನ್ಮುಖಿ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಡವನಹಳ್ಳಿ ವೀರಣ್ಣಗೌಡ ಅವರ “ಬಯಲ ಕುಸುಮದ ಪರಿಮಳ”, ಮಂಜುನಾಥ್ ದಂಡಿನಶಿವರ ಅವರ “ಬರಹಗಳ ಹಾದಿಯಲ್ಲಿ” ಮತ್ತು ಸಂಗಮೇಶ ಹುನಗುಂದ ಅವರ “ಕಾವ್ಯಸಂಗಮ” ಕೃತಿಗಳನ್ನು ಬರಗೂರು ರಾಮಚಂದ್ರಪ್ಪ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆ ಕ್ಷಣಗಳು ಸಾಹಿತ್ಯಾಸಕ್ತರ ಮೆಚ್ಚುಗೆಗೆ ಪಾತ್ರವಾದವು.

ರಾಜರ್ಷಿ ಪ್ರಕಾಶನದ ಜೊತೆಗೆ ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಹಾಗೂ ಜನಮನ ಸೇವಾ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮ ಸಾಹಿತ್ಯ, ಸ್ನೇಹ ಮತ್ತು ಸಾಂಸ್ಕೃತಿಕ ಸೌಹಾರ್ದದ ಸೊಗಸಾದ ಸಂಭ್ರಮವಾಗಿ ರೂಪುಗೊಂಡಿತು. ಸಭೆಗೆ ಮುನ್ನ ನಡೆದ ಗೀತಗಾಯನ ಕಾರ್ಯಕ್ರಮವು ಸಮಾರಂಭದ ವಾತಾವರಣಕ್ಕೆ ಮತ್ತಷ್ಟು ಸಾಂಸ್ಕೃತಿಕ ಮೆರಗು ತಂದಿತು.

 

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb