ಬೆಂಗಳೂರಿನ ವಿಜಯನಗರದಲ್ಲಿ ವಚನ ಜ್ಯೋತಿ ಬಳಗದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಜರುಗಿತು.
ಈ ಕಾರ್ಯಕ್ರಮದಲ್ಲಿ ವೀರಗಾಸೆ ಕುಣಿತ ಹಾಗೂ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಮುಖಂಡರು, ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿಜಯನಗರದ ಪ್ರಮುಖ ರಸ್ತೆಗಳಲ್ಲಿ ಬಸವ ಜಯಂತಿಯ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆ ಪಾನಕವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಚನಜ್ಯೋತಿ ಬಳಗದ ಅಧ್ಯಕ್ಷರಾದ ಪಿನಾಕ ಪಾಣಿರವರು ಹಾಗೂ ಇತರೆ ಪ್ರಮುಖ ಗಣ್ಯರು ಪಾಲ್ಗೊಂಡಿದ್ದರು.

