ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ʼಜೀವನ್ಮುಖಿʼ ಪ್ರಶಸ್ತಿಗೆ ನಾಲ್ವರು ಸಾಧಕರ ಆಯ್ಕೆ

Posted on May 25, 2026May 29, 2026 by suddisangathi

ಸುದ್ದಿಸಂಗಾತಿ ನ್ಯೂಸ್

ಬೆಂಗಳೂರು: ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ಜೀವನ್ಮುಖಿ ಕನ್ನಡ ಪಾಕ್ಷಿಕ ಪತ್ರಿಕೆಯು ನೀಡುತ್ತಿರುವ ೧೬ನೇ ವರ್ಷದ “ಜೀವನ್ಮುಖಿ ಪ್ರಶಸ್ತಿ” ಪುರಸ್ಕಾರಕ್ಕೆ ರಾಜ್ಯ ಮಟ್ಟದ ನಾಲ್ಕು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ. ಆರತಿ ಕೃಷ್ಣ, ಲೇಖಕರು, ಆಯುಕ್ತರು, ಗೃಹ ಮಂಡಳಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಐಎಎಸ್ ಅಧಿಕಾರಿಯಾದ ಶ್ರೀ ಕೆ.ಎ. ದಯಾನಂದ, ಬೆಂಗಳೂರು ಪಶ್ಚಿಮ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ ಎನ್. ಯತೀಶ್ ಐಪಿಎಸ್ ಮತ್ತು ಸಾಹಿತಿ ಹಾಗೂ ಸಾಂಸ್ಕೃತಿಕ ಸಂಘಟಕರಾದ ಶ್ರೀ ನಂ. ನಂಜಪ್ಪ ರಾಜಣ್ಣ ರವರು ೨೦೨೬ರ “ಜೀವನ್ಮುಖಿ ಪ್ರಶಸ್ತಿ” ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ. 5000 ನಗದು, ಫಲಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.

ಈ ಸಮಾರಂಭವು ದಿನಾಂಕ : ೦೭-೦೬-೨೦೨೬ರ ಭಾನುವಾರ ಸಂಜೆ ೪-೦೦ ಗಂಟೆಗೆ ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದ್ದು, ಪ್ರಸಿದ್ಧ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ರವರು ಉದ್ಘಾಟನೆ ಮಾಡುವರು, ಕರ್ನಾಟಕ ಜಾನಪದ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಶ್ರೀ ಟಿ ತಿಮ್ಮೇಗೌಡ ರವರು ಪ್ರಶಸ್ತಿ ಪ್ರದಾನ ಮಾಡುವರು, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷರಾದ ಶ್ರೀ ಪಿ. ಮಲ್ಲಿಕಾರ್ಜುನಪ್ಪ ರವರು ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ನಾಡಿನ ಪ್ರತಿಭಾವಂತ ಬಾಲ ಪ್ರತಿಭೆಗಳಾದ ಕ್ಷಮ ಯು. ಐತಾಳ್, ಚಿಂರತ್ ಎಸ್., ಶಿವಾನಿ ಬಿ., ಖುಷಿ ಪ್ರದೀಪ್, ಹಾಸಿನಿ ಪಿ. ಗೌಡ, ರಂಜಿತಾ ಬಿ.ಎನ್., ಎಚ್.ಎಸ್. ದೀಪ್ತಿ ಪ್ರೀಯಾ, ಚಿಂರತ್ ಎಸ್. ರವಿ, ದೀಕ್ಷಿತ ಕರಣ, ಸಮನ್ವಿ ಸಂತೋಷ, ಅನಿತ್ ಎಲ್., ಗಗನ್ ಬಿ., ಹಿತೈಷಿನಿ ಆರ್., ಪ್ರಜ್ವಲ್ ಎಸ್., ವಿಭಾ ವಿ., ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸತ್ಕರಿಸಲಾಗುವುದು ಎಂದು ಖ್ಯಾತ ಸಂಘಟಕರಾದ ಜೀವನ್ಮುಖಿ ಸುರೇಶ್‌ ತಿಳಿಸಿದ್ದಾರೆ.

1 thought on “ʼಜೀವನ್ಮುಖಿʼ ಪ್ರಶಸ್ತಿಗೆ ನಾಲ್ವರು ಸಾಧಕರ ಆಯ್ಕೆ”

  1. ಜೀವನ್ಮುಖಿ ಸುರೇಶ್ says:
    May 29, 2026 at 9:20 pm

    ಧನ್ಯವಾದಗಳು ಸರ್

    Reply

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb