ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

ಐಡಿ ಕಾರ್ಡ್ ಕಡ್ಡಾಯ: ಅಪ್ರಾಪ್ತರಿಗೆ ಪಬ್‌, ಬಾರ್‌ ಪ್ರವೇಶಕ್ಕೆ ಬ್ರೇಕ್!

Posted on June 11, 2026June 11, 2026 by suddisangathi

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಬಳಕೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಪಬ್‌, ಬಾರ್‌, ಕ್ಲಬ್‌, ಲಾಂಜ್‌, ರೆಸ್ಟೋರೆಂಟ್ ಸೇರಿದಂತೆ ಮದ್ಯ ಮಾರಾಟ ಮಾಡುವ ಎಲ್ಲ ಸಂಸ್ಥೆಗಳಲ್ಲಿ ಗ್ರಾಹಕರ ವಯಸ್ಸಿನ ಪರಿಶೀಲನೆ ಕಡ್ಡಾಯವಾಗಲಿದೆ. ಗುರುತಿನ ಚೀಟಿ (ಐಡಿ ಕಾರ್ಡ್) ಇಲ್ಲದವರಿಗೆ ಪ್ರವೇಶ ನಿರಾಕರಿಸುವಂತೆ ಸೂಚನೆ ನೀಡಲಾಗಿದೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ನಿರ್ದೇಶಿಸಿದ್ದಾರೆ. ಅಪ್ರಾಪ್ತ ವಯಸ್ಕರು ಮದ್ಯ ಸೇವಿಸುವುದನ್ನು ತಡೆಯಲು ಪ್ರವೇಶ ದ್ವಾರದಲ್ಲೇ ವಯಸ್ಸು ಪರಿಶೀಲಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಪಬ್‌, ಬ್ರೂವರಿ, ಬಾರ್‌, ಕ್ಲಬ್‌, ಲಾಂಜ್ ಹಾಗೂ ಮದ್ಯ ಮಾರಾಟ ಮಾಡುವ ಎಲ್ಲ ಸಂಸ್ಥೆಗಳಿಗೆ ಈ ಸಂಬಂಧ ನೋಟಿಸ್ ನೀಡಲಾಗುತ್ತಿದ್ದು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕ್ರಮಕ್ಕೆ ಹಿನ್ನೆಲೆಯಾಗಿ ಬೆಂಗಳೂರಿನಲ್ಲಿ 4,093 ವಿದ್ಯಾರ್ಥಿಗಳನ್ನು ಒಳಗೊಂಡು ನಡೆಸಲಾದ ಅಧ್ಯಯನ ವರದಿ ಕಾರಣವಾಗಿದೆ. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಕ್ರೈಸ್ಟ್ ವಿಶ್ವವಿದ್ಯಾಲಯ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಂಶೋಧಕರು ನಡೆಸಿದ ಸಮೀಕ್ಷೆಯಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ.

ಅಧ್ಯಯನದ ಪ್ರಕಾರ, ಪ್ರತಿ ಮೂವರು ಹದಿಹರೆಯದವರಲ್ಲಿ ಒಬ್ಬರು ಮದ್ಯ ಅಥವಾ ತಂಬಾಕು ಬಳಕೆಯಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶೇ.33 ಮಂದಿ ಮದ್ಯಪಾನದ ಚಟಕ್ಕೆ ಒಳಗಾಗಿದ್ದರೆ, ಶೇ.18 ಮಂದಿ ತಂಬಾಕು ವ್ಯಸನ ಹೊಂದಿರುವುದು ಕಂಡುಬಂದಿದೆ.

ಇನ್ನೂ ಆತಂಕಕಾರಿ ವಿಷಯವೆಂದರೆ, ಮದ್ಯಪಾನ ಆರಂಭಿಸುವ ಸರಾಸರಿ ವಯಸ್ಸು 17 ವರ್ಷವಾಗಿದ್ದು, ಕೆಲವು ಪ್ರಕರಣಗಳಲ್ಲಿ ಮಕ್ಕಳು 8ನೇ ವಯಸ್ಸಿನಲ್ಲೇ ಮದ್ಯ ಸೇವನೆ ಆರಂಭಿಸಿರುವುದು ದಾಖಲಾಗಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, “ಇದು ಕೇವಲ ಪರವಾನಗಿ ಅಥವಾ ವ್ಯಾಪಾರದ ವಿಚಾರವಲ್ಲ. ಯುವಜನರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ಪ್ರಶ್ನೆಯಾಗಿದೆ. ಆದ್ದರಿಂದ ಮದ್ಯ ಮಾರಾಟ ಮಾಡುವ ಎಲ್ಲ ಸಂಸ್ಥೆಗಳು ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು” ಎಂದು ತಿಳಿಸಿದ್ದಾರೆ.

ಹೀಗಾಗಿ ಇನ್ಮುಂದೆ ಐಡಿ ಕಾರ್ಡ್ ಇಲ್ಲದೆ ಪಬ್‌, ಬಾರ್‌ ಹಾಗೂ ಮದ್ಯ ಸರಬರಾಜು ಮಾಡುವ ಹಲವು ಸಂಸ್ಥೆಗಳಿಗೆ ಪ್ರವೇಶ ಪಡೆಯುವುದು ಕಷ್ಟವಾಗಲಿದೆ.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb