ಇದು ಮಂಜುನಾಥ್‌ ದಂಡಿನಶಿವರ ಸಂಪಾದಕತ್ವದಲ್ಲಿ ಪ್ರಸಾರವಾಗುತ್ತಿರುವ ವಿನೂತನ ವೆಬ್ಸೈಟ್.‌ ತಾಜಾ ಸುದ್ದಿಗಳನ್ನು ನೀವು ಇದರಲ್ಲಿ ಓದಬಹುದು. ಇದೇ ವೆಬ್‌ನಲ್ಲಿ ನಮ್ಮ ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯನ್ನೂ ಓದಬಹುದು.
ಪ್ರಮುಖ ಸುದ್ದಿಗಳನ್ನು ಓದಲು ನಮ್ಮ ವೆಬ್ಸೈಟ್‌ ನೋಡಿ...www.suddisangathidwani.in ಇದು ಸುದ್ದಿಸಂಗಾತಿ ಧ್ವನಿ ಕನ್ನಡ ಮಾಸ ಪತ್ರಿಕೆಯ ಅಧಿಕೃತ ವೆಬ್ಸೈಟ್‌ ಆಗಿದೆ. ನಿಮ್ಮ ಸುದ್ದಿಗಳು ನಮ್ಮ ವೆಬ್‌ ನಲ್ಲಿ ಪ್ರಕಟವಾಗಬೇಕೆ? ಹಾಗಾದರೆ ನಿಮ್ಮ ಸುದ್ದಿ ಮತ್ತು ಚಿತ್ರಗಳನ್ನು ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
ಸುದ್ದಿಸಂಗಾತಿ ಧ್ವನಿ ಮಾಸಪತ್ರಿಕೆಯಲ್ಲಿ ಪ್ರಕಟಿಸಲು ತಮ್ಮ ಲೇಖನ, ಸಣ್ಣಕಥೆ, ಕವನ, ಹಾಸ್ಯಲೇಖನ, ಪುಸ್ತಕ ಪರಿಚಯ, ಪ್ರವಾಸಿ ಸ್ಥಳಗಳ ಪರಿಚಯ, ಆರೋಗ್ಯ, ಪ್ರಚಲಿತ ಮತ್ತು ರಾಜಕೀಯ ಬರಹಗಳನ್ನು ಆಹ್ವಾನಿಸುತ್ತಿದ್ದೇವೆ. ತಮ್ಮ ಬರಹಗಳನ್ನು ಪೋಟೋಗಳೋಂದಿಗೆ ನಮಗೆ ಕಳುಹಿಸಿ. ನಮ್ಮ ಇಮೇಲ್‌ - suddisangathi@gmail.com
Skip to content
suddisangathi dwani
Menu
  • Home
  • Newsbeat
  • ಲೇಟೆಸ್ಟ್‌ ನ್ಯೂಸ್
  • Stories
  • E-PAPER
  • ಜಾಹೀರಾತು
Menu

84.31 ಲಕ್ಷ ಮತದಾರರ ಹೆಸರು ಡಿಲೀಟ್…!?

Posted on July 29, 2026July 29, 2026 by suddisangathi

ಕರ್ನಾಟಕದಲ್ಲಿ 84.31 ಲಕ್ಷ ಮತದಾರರ ಹೆಸರು ಮೊದಲ ಕರಡು ಪಟ್ಟಿಯಿಂದ ಕೈಬಿಡಲು ಗುರುತು; ‌

ಸ್ಥಳಾಂತರಗೊಂಡವರೇ ಹೆಚ್ಚು…!

ಬೆಂಗಳೂರು, ಜು. 29: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮೊದಲ ಕರಡು ಮತದಾರರ ಪಟ್ಟಿಯಿಂದ ಸುಮಾರು 84,31,612 ಮತದಾರರ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗ ಗುರುತಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪರಿಶೀಲನೆಗಾಗಿ ಬಿಎಲ್‌ಒಗಳು (BLO) ಮನೆ ಮನೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದು, ಮೃತಪಟ್ಟವರ ಮರಣ ಪ್ರಮಾಣಪತ್ರಗಳನ್ನು ಸಂಗ್ರಹಿಸುವುದರ ಜೊತೆಗೆ ಸಂಬಂಧಿಕರಿಂದ ದೃಢೀಕರಣ ಸಹ ಪಡೆಯಲಾಗಿದೆ ಎಂದು ತಿಳಿಸಿದರು. ಈ ಪರಿಶೀಲನೆ ಆಧರಿಸಿ ಮೊದಲ ಕರಡು ಪಟ್ಟಿಯಿಂದ ಕೆಲವು ಹೆಸರುಗಳನ್ನು ಹೊರಗಿಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಗುರುತಿಸಲಾದ 84.31 ಲಕ್ಷ ಮತದಾರರಲ್ಲಿ 51,74,968 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು ಎಂಬುದು ಪ್ರಮುಖ ಅಂಶವಾಗಿದೆ. ಇದರೊಂದಿಗೆ 14,99,799 ಮಂದಿ ಮೃತಪಟ್ಟವರು, 11,61,231 ಮಂದಿ ವಿಳಾಸದಲ್ಲಿ ಪತ್ತೆಯಾಗದವರು, 5,62,572 ಮಂದಿ ನಕಲಿ ಅಥವಾ ಎರಡು ಕಡೆ ಮತದಾರರಾಗಿ ದಾಖಲಾಗಿರುವವರು ಹಾಗೂ 33,042 ಮಂದಿ ಪರಿಶೀಲನೆ ವೇಳೆ ಸಹಿ ನೀಡಲು ನಿರಾಕರಿಸಿದವರು ಸೇರಿದ್ದಾರೆ.

ಗ್ರೇಟರ್‌ ಬೆಂಗಳೂರಿನಲ್ಲಿ 40% ಮತದಾರರ ಮಾಹಿತಿ ಇನ್ನೂ ಲಭ್ಯವಿಲ್ಲ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಸುಮಾರು 1.30 ಕೋಟಿ ಮತದಾರರು ಇದ್ದು, ಇದುವರೆಗೆ 47.97 ಲಕ್ಷ ಮಂದಿ ಮಾತ್ರ ಎನ್ಯೂಮರೇಷನ್ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಸುಮಾರು 39.38 ಲಕ್ಷ ಮತದಾರರ ಮಾಹಿತಿ ಇನ್ನೂ ಲಭ್ಯವಾಗಿಲ್ಲ, ಇದು ಒಟ್ಟು ಮತದಾರರ ಶೇಕಡಾ 40ರಷ್ಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ 16.57 ಲಕ್ಷ ಮಂದಿ ಇನ್ನೂ ಅರ್ಜಿ ಸಲ್ಲಿಸಬೇಕಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಎಸ್‌ಐಆರ್ ಪ್ರಗತಿ ಶೇ. 76.99

ರಾಜ್ಯಾದ್ಯಂತ ಒಟ್ಟು 5,54,32,314 ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಈ ಪೈಕಿ 4,26,75,861 ಅರ್ಜಿಗಳು ವಾಪಸ್ ಸ್ವೀಕರಿಸಿ ಡಿಜಿಟೈಸೇಷನ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇದರೊಂದಿಗೆ ಎಸ್‌ಐಆರ್ ಪ್ರಕ್ರಿಯೆ ಶೇಕಡಾ 76.99ರಷ್ಟು ಪೂರ್ಣಗೊಂಡಿದೆ.

ಇನ್ನೂ 43,24,841 ಮತದಾರರ ಮಾಹಿತಿ ಸಂಗ್ರಹವಾಗಬೇಕಿದ್ದು, ಆಗಸ್ಟ್‌ 8ರ ಬಳಿಕ ಅಂತಿಮ ಚಿತ್ರಣ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆನ್‌ಲೈನ್ ಅರ್ಜಿಗಳಿಗೂ ಉತ್ತಮ ಸ್ಪಂದನೆ

ಇದುವರೆಗೆ 3.22 ಲಕ್ಷ ಆನ್‌ಲೈನ್ ಅರ್ಜಿಗಳು, 2,283 ಫಾರ್ಮ್–6A ಅರ್ಜಿಗಳು ಹಾಗೂ 7.73 ಲಕ್ಷ ಫಾರ್ಮ್–7 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ.

ಆಗಸ್ಟ್‌ 8ರೊಳಗೆ ಅರ್ಜಿ ಸಲ್ಲಿಸಲು ಮನವಿ

ಇನ್ನೂ ಅರ್ಜಿ ಸಲ್ಲಿಸದ ಮತದಾರರು ಆಗಸ್ಟ್‌ 8ರೊಳಗೆ ತಮ್ಮ ವ್ಯಾಪ್ತಿಯ ಬಿಎಲ್‌ಒಗಳ ನೆರವಿನಿಂದ ಎನ್ಯೂಮರೇಷನ್ ಫಾರ್ಮ್ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.

ಸುಮಾರು 29 ಲಕ್ಷ ಮತದಾರರು ‘2002ರ ಮಾಹಿತಿ ಲಭ್ಯವಿಲ್ಲ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರೂ, ಅಗತ್ಯ ದಾಖಲೆಗಳೊಂದಿಗೆ ಬಿಎಲ್‌ಒಗಳ ಸಹಾಯದಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸ್ಥಳಾಂತರಗೊಂಡವರಿಗೆ ಫಾರ್ಮ್–6 ಮೂಲಕ ಅವಕಾಶ

ಶಾಶ್ವತವಾಗಿ ಸ್ಥಳಾಂತರಗೊಂಡು ಪ್ರಸ್ತುತ ಕರ್ನಾಟಕದ ಬೇರೆ ಕ್ಷೇತ್ರದಲ್ಲಿ ವಾಸಿಸುತ್ತಿರುವ ಹಾಗೂ ದೇಶದ ಇನ್ನಾವುದೇ ಸ್ಥಳದಲ್ಲಿ ಮತದಾರರಾಗಿ ನೋಂದಾಯಿಸದಿರುವವರು ಫಾರ್ಮ್–6 ಮೂಲಕ ಹೊಸ ವಿಳಾಸದ ದಾಖಲಾತಿ ಸಲ್ಲಿಸಿ ಮತ್ತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಳ್ಳಬಹುದು. ಆದರೆ ಸೂಕ್ತ ದಾಖಲೆ ಸಲ್ಲಿಸದಿದ್ದರೆ ಅವರ ಹೆಸರು ಅಂತಿಮ ಮತದಾರರ ಪಟ್ಟಿಯಿಂದಲೂ ಕೈಬಿಡಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Leave a Reply Cancel reply

Your email address will not be published. Required fields are marked *

Download
Download

ನೂತನ ಪದಾಧಿಕಾರಿಗಳಿಗೆ ಸುದ್ದಿಸಂಗಾತಿಯ ಅಭಿನಂದನೆಗಳು

ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ನೇಮಗೊಂಡ ಗಾಂಧಿ ನೇತೃತ್ವದ ಪದಾಧಿಕಾರಿಗಳಿಗೆ ನಮ್ಮ ಪತ್ರಿಕೆಯಿಂದ ಅಭಿನಂದನೆ ಸಲ್ಲಿಸಲಾಯಿತು.

ವಿಶೇಷಾಂಕ ಬಿಡುಗಡೆ

ಸುದ್ದಿಸಂಗಾತಿ ಧ್ವನಿ ಪತ್ರಿಕೆಯ ಆರೋಗ್ಯ -ಆಧ್ಯಾತ್ಮ ವಿಶೇಷಾಂಕವನ್ನು ಇತ್ತೀಚೆಗೆ ಬಿಡುಗಡೆ ಮಾಡಲ

ಸುದ್ದಿಸಂಗಾತಿ ಧ್ವನಿ

Editor: D.N.Manjunath

suddisangathi@gmail.com

Categories

E-PAPER e magazine Health MANJUGANNADI Newsbeat Sports Stories Uncategorized ಅಂಕಣ- ಅಕ್ಕಡಿಸಾಲು ಆಚರಣೆಗಳು ಕಿರುತೆರೆ ಸುದ್ದಿ ಜಾಹೀರಾತು ಬಸವೇಶ್ವರ ಜಯಂತಿ ವಿಶೇಷ ಮಂಜುಗನ್ನಡಿ- ಅಂಕಣ ಲೇಟೆಸ್ಟ್‌ ನ್ಯೂಸ್ ಸಿನಿಮಾ ಸುದ್ದಿಗಳು

Tags

Business https://online.fliphtml5.com/enyby/ssd-april-26-ready/ Newsbeat Stories USA World ಸುದ್ದಿಸಂಗಾತಿ ದ್ವನಿ ಜೂನ್‌ 26ರ ಸಂಚಿಕೆ ಸುದ್ದಿಸಂಗಾತಿ ನ್ಯೂಸ್

Suddisangathi

Info Box

Click here to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

Table of Contents
  1. ಸುದ್ದಿಸಂಗಾತಿ ಧ್ವನಿ
  2. Suddisangathi

Info Box

ಪತ್ರಿಕಾ ದಿನಾಚರಣೆಯಲ್ಲಿ ಗುರುತಿನ ಚೀಟಿ ವಿತರಿಸಿಸ ಸಚಿವರಾದ ರಾಮಲಿಂಗಾರೆಡ್ಡಿ.

©2026 suddisangathi dwani | Design: Newspaperly WordPress Theme

WhatsApp us

Website security powered by MilesWeb